ಜು.19ರಿಂದ ಗೃಹಲಕ್ಷ್ಮೀ ಯೋಜನೆ; ಆಧಾರ್ ಲಿಂಕ್ ಮಾಡಿದ ಖಾತೆಗೆ 2000 ರೂ

ಶೇರ್ ಮಾಡಿ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯನ್ನು ಜುಲೈ 17 ಅಥವಾ 19ರಿಂದ ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸುದ್ದಿಗೋಷ್ಠಿ ನಡೆಸಿದ ಅವರು ಗೃಹ ಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಮಾಹಿತಿ ನೀಡಿದರು.
ಯೋಜನೆ ಉದ್ಘಾಟನೆಗೆ ನಮ್ಮ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆಯಲಾಗಿದ್ದು, ಅವರು ಲಭ್ಯವಾದರೆ ಜುಲೈ 17 ಸೋಮವಾರ ಸಂಜೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಉದ್ಘಾಟಿಸಲಾಗುದು. ರಾಷ್ಟ್ರೀಯ ನಾಯಕರು ಬರದಿದ್ದಲ್ಲಿ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಾರೆ ಎಂದು ಹೇಳಿದರು.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 19ರಿಂದ ಅವಕಾಶವಿದೆ. ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಗೃಹ ಜ್ಯೋತಿ ಯೋಜನೆಯಂತೆ ಈ ಯೋಜನೆಗೆ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಬೇಡಿಕೆ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸಲಾಗುವುದು. ಆದರೆ ಅರ್ಜಿ ಸಲ್ಲಿಕೆಗೆ ಯಾವುದೇ ಡೆಡ್ ಲೈನ್ ಇಲ್ಲ ಎಂದು ಹೆಬ್ಬಾಳ್ಕರ್ ಮಾಹಿತಿ ನೀಡಿದರು.
ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಯೋಜನೆಯಿಂದ 1.28 ಕೋಟಿ ಕುಟುಂಬಗಳಿಗೆ ಲಾಭ ಸಿಗಲಿದೆ ಎಂದು ಹೇಳಿದರು.

Leave a Reply

error: Content is protected !!