ಮಂಗಳೂರು ಯುವತಿಗೆ ‘ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ ನ್ಯಾಷನಲ್ – 2023’ ಕಿರೀಟ

ಶೇರ್ ಮಾಡಿ

ಮಂಗಳೂರು: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್ಸ್ ಆಯೋಜಿಸಿರುವ ಸ್ಪರ್ಧೆಯಲ್ಲಿ ಮಂಗಳೂರು‌ ನಗರಿಯ ಶಮಾ ವಾಜಿದ್, “ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್‌ನ್ಯಾಷನಲ್‌ ಯೂನಿವರ್ಸ್ – 2023’ ಕಿರೀಟವನ್ನು ಮುಡಿಗೇರಿಸಿದ್ದಾರೆ. ಈ ಮೂಲಕ ಅವರು 2024ರ ಗ್ಲೋಬಲ್ ಮಿಸೆಸ್ ಯೂನಿವರ್ಸ್ ಸ್ಪರ್ಧೆಗೆ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ದೇಶದ 22ಕ್ಕೂ ಅಧಿಕ ರಾಜ್ಯಗಳಲ್ಲಿ ಸ್ಪರ್ಧೆಯ ಆಡಿಷನ್‌ ನಡೆದಿದೆ. ಸಾವಿರಾರು ಮಹಿಳೆಯರಲ್ಲಿ ಶಮಾ ವಾಜಿದ್ ನವದೆಹಲಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಗೆ ತಲುಪಿದ ಟಾಪ್ 40ರಲ್ಲಿ ಒಬ್ಬರಾಗಿದ್ದರು. ಎಲ್ಲಾ ಫೈನಲಿಸ್ಟ್‌ಗಳು 5 ದಿನಗಳ ಕಾಲ ಮಾರ್ಗದರ್ಶಕರಿಂದ ಕ್ಯಾಟ್‌ವಾಕ್, ಗ್ರೂಮಿಂಗ್, ಕೊರಿಯೋಗ್ರಫಿ, ಇಮೇಜ್ ಕನ್ಸಲ್ಟಿಂಗ್, ಆತಂಕ ನಿರ್ವಹಣೆ, ದೈಹಿಕ ಫಿಟ್‌ನೆಸ್ ಇತ್ಯಾದಿಗಳ ಉತ್ತಮ ಅಂಶಗಳಲ್ಲಿ ಕಠಿಣ ತರಬೇತಿಯನ್ನು ಪಡೆದರು.

ಕರ್ನಾಟಕವನ್ನು ಪ್ರತಿನಿಧಿಸಿದ ಶಾಮಾ ವಾಜಿದ್ ಫೂಲ್ ರೌಂಡ್, ಎಕ್ನಿಕ್ ರೌಂಡ್, ಟ್ಯಾಲೆಂಟ್ ರೌಂಡ್ ಮತ್ತು ಫಾರ್ಮಲ್ ಸುತ್ತುಗಳಂತಹ ವಿವಿಧ ಸುತ್ತುಗಳಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಅಗ್ರ 10 ಫೈನಲಿಸ್ಟ್ ಗಳಲ್ಲಿ ಸ್ಥಾನ ಪಡೆದರು. ಅಂತಿಮವಾಗಿ ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ ನ್ಯಾಷನಲ್ ಯೂನಿವರ್ಸ್ 2023ರ ಕಿರೀಟವನ್ನು ಬಾಲಿವುಡ್ ಸೆಲೆಬ್ರಿಟಿ ಮಲೈಕಾ ಅರೋರಾ ಅವರಿಂದ ಮುಡಿಗೇರಿಸಿದರು.
ಶಮಾ ವಾಜಿದ್ ಗೆ 13 ತಿಂಗಳ ಗಂಡು ಮಗುವಿದೆ. ಈ ಸ್ಪರ್ಧೆ ವಿವಾಹಿತ ಮಹಿಳೆಯರಿಗೆ ಮಾತ್ರವಿದ್ದು, ಪುಟ್ಟ ಮಗುವಿನ‌ ಲಾಲನೆ ಮಾಡುತ್ತಾ ಅವರು ಈ ಸ್ಪರ್ಧೆಯಲ್ಲಿ ವಿಜಯಿಯಾಗಿದ್ದಾರೆ.
ಮುಸ್ಲಿಂ ಸಮುದಾಯದವರು ಫ್ಯಾಶನ್ ಲೋಕಕ್ಕೆ ಕಾಲಿಡುವುದು ತೀರಾ ವಿರಳ. ಅಂತಹದರಲ್ಲಿ ಶಮಾ ವಾಜಿದ್ ಮುಸ್ಲಿಂ ಸಮುದಾಯವರಾದರೂ ಕುಟುಂಬದವರ ಪ್ರೋತ್ಸಾಹದಿಂದ ಫ್ಯಾಶನ್ ಲೋಕದಲ್ಲಿ ಸಾಧನೆ ಮಾಡಿದ್ದಾರೆ. ಅವರು ಶ್ರೀನಿವಾಸ ಆರ್ಕಿಟೆಕ್ಟ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Leave a Reply

error: Content is protected !!