ಉಯ್ಯಾಲೆ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಮೃತ್ಯು

ಶೇರ್ ಮಾಡಿ

ಬೆಳ್ತಂಗಡಿ:ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಮುಂಡಾಜೆ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.
ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು,‌ ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಧನರಾಜ್ ಮತ್ತು ಸಿಬಂದಿ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!