ಚಾರ್ಮಾಡಿ ಅಕ್ರಮ ಮರಳು ಸಾಗಾಣಿಕೆ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ; ಲಾರಿ ವಶ

ಶೇರ್ ಮಾಡಿ

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ವಾಹನವನ್ನು ವಶಪಡಿಸಿಕೊಂಡಿದ್ದಾರೆ
ಚಾರ್ಮಾಡಿಯಲ್ಲಿ ಧರ್ಮಸ್ಥಳ ಎಸ್.ಐ. ಅನಿಲ್ ಕುಮಾರ್ ನೇತೃತ್ವದ ತಂಡ ವಾಹನ ತಪಾಸಣೆ ಮಾಡಿದಾಗ ಮರಳು ಸಾಗಾಟ ಪತ್ತೆಯಾಗಿದೆ.ಈ ಬಗ್ಗೆ ಲಾರಿ ಚಾಲಕ ಅನ್ವರ್ ಎಂಬಾತನನ್ನು ವಿಚಾರಿಸಲಾಗಿ ಆತನ ಬಳಿ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೆ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ.
ಪ್ರಸ್ತುತ ಮಳೆ ಕಡಿಮೆಯಾಗಿದ್ದು, ನದಿಗಳ ನೀರನ ಹರಿವು ಇಳಿಕೆಗೊಂಡ ಕಾರಣ ಅಕ್ರಮ ಮರಳುಗಾರಿಕೆ ಮತ್ತೆ ಈ ಭಾಗದಲ್ಲಿ ಜೀವ ಪಡೆದಿದೆ.

Leave a Reply

error: Content is protected !!