ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು

ಶೇರ್ ಮಾಡಿ

ಸುಳ್ಯ: ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಕನಕಮಜಲಿನಲ್ಲಿ ರವಿವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಅವರ ಮನೆಯಲ್ಲಿ ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸಂಬಂಧಿಯೊಬ್ಬರು ನಿಧನರಾದ ಹಿನ್ನಲೆಯಲ್ಲಿ ಯುರೇಶ್ ಬುಡ್ಲೆಗುತ್ತು ಮತ್ತು ಕುಟುಂಬದವರು ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದರು.

Leave a Reply

error: Content is protected !!