ಪಶುಸಂಗೋಪನೆ ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ. SSLC ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ಶೇರ್ ಮಾಡಿ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, 2023-24ನೇ ಶೈಕ್ಷಣಿಕ ಸಾಲಿನ ಪಶುಸಂಗೋಪನಾ ಡಿಪ್ಲೊಮ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳೆಗೆ ಅರ್ಜಿ ಸಲ್ಲಿಸಬಹುದಾಗಿದೆ.

2023-24ನೇ ಶೈಕ್ಷಣಿಕ ಸಾಲಿನ ಪಶುಸಂಗೋಪನಾ ಪಾಲಿಟೆಕ್ನಿಕ್ ಎರಡು ವರ್ಷದ ಡಿಪ್ಲೊಮ ಕೋಸ್‌ಗೆ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 31,2023 ಕೊನೆಯ ದಿನಾಂಕವಾಗಿದೆ.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ವ್ಯಾಪ್ತಿಯಲ್ಲಿ ಬರುವ ಪಶುಸಂಗೋಪನಾ ಪಾಲಿಟೆಕ್ನಿಕ್ ಕುನ್ನೂರು ಶಿಗ್ಗಾಂವಿ, ಹಾವೇರಿ ಜಿಲ್ಲೆ ತಲಾ 50 ಸೀಟುಗಳಿಗೆ 2023-24ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ ಎರಡು ವರ್ಷ ಅವಧಿಯ ಡಿಪ್ಲೊಮ ಕೋರ್ಸ್ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈಗ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ವ್ಯಾಪ್ತಿಯಲ್ಲಿ ಬರುವ ಇನ್ನೂಳಿದ ಪಶುಸಂಗೋಪನಾ ಪಾಲಿಟೆಕ್ನಿಕ್, ಕೊರಮಂಗಲ ಕ್ರಾಸ್, ಹಾಸನ, ಪಶುಸಂಗೋಪನಾ ಪಾಲಿಟೆಕ್ನಿಕ್, ಬರ್ಗಿ, ಗುಂಡ್ಲುಪೇಟೆ ತಾಲ್ಲೂಕು, ಚಾಮರಾಜನಗರ ಮತ್ತು ಪಶುಸಂಗೋಪನಾ ಪಾಲಿಟೆಕ್ನಿಕ್, ಡೋರ್ನಳ್ಳಿ, ಶಾಹಪೂರ ತಾಲ್ಲೂಕು, ಯಾದಗಿರಿ ತಲಾ 50 ಸೀಟುಗಳಂತೆ ಭರ್ತಿಮಾಡಲು ತಿರ್ಮಾನಿಸಲಾಗಿದೆ.

ಅರ್ಜಿಯಲ್ಲಿ ಕೇಳಲಾದ ಎಲ್ಲಾ ಅಗತ್ಯ ಮಾಹಿತಿ ಹಾಗೂ ಅಡಕಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ಮೂಲ ಡಿ.ಡಿ.ಯೊಂದಿಗೆ (ಯಾವುದೇ ರಾಷ್ಟ್ರೀಕೃತ ಬ್ಯಾಂಕ್) ದಿನಾಂಕ 31-07-2023ರ ಸಾಯಂಕಾಲ 5.00 ಗಂಟೆ ಒಳಗಾಗಿ ಕುಲಸಚಿವರು, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ನಂದಿನಗರ, ಅಂಚೆ ಪೆಟ್ಟಿಗೆ ಸಂಖ್ಯೆ-6, ಬೀದರ್-585226 ಇವರ ಕಛೇರಿಗೆ ಸಲ್ಲಿಸಬೇಕು. ಸದರಿ ಕಡೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡು ವರ್ಷದ ಡಿಪ್ಲೊಮ ಕೋರ್ಸ್‌ಗೆ ಎಸ್‌ಎಸ್‌ಎಲ್‌ಸಿ / ತತ್ಸಮಾನ ತೇರ್ಗಡೆಯಾದ ಹಾಗೂ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.kvafsu.edu.in ನಲ್ಲಿ ಪಡೆಯಬಹುದಾಗಿದೆ.

  • ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
  • ಎಸ್‌ಎಸ್‌ಎಲ್‌ಸಿ/ ತತ್ಸಮಾನ ತೇರ್ಗಡೆಯಾದ ಅಂಕಪಟ್ಟಿ.
  • ಜಾತಿ ಪ್ರಮಾಣ ಪತ್ರ (ಅನ್ವಯಿಸಿದ್ದಲ್ಲಿ).
  • ಆದಾಯ ಪ್ರಮಾಣ ಪತ್ರ.
  • ಖಾಯಂ ವಿಳಾಸ ಪ್ರಮಾಣ ಪತ್ರ.
  • ದೃಢಿಕೃತ ಪ್ರಮಾಣ ಪತ್ರಗಳು.
  • ವಿಶೇಷಚೇತನ ಪ್ರಮಾಣ ಪತ್ರ (ಅನ್ವಯಿಸಿದ್ದಲ್ಲಿ).
  • ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 16-06-2023.
  • ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ – 31-07-2023.
  • ಅರ್ಜಿ ಪರಿಶೀಲನೆ (ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್) – 01-08-2023 ರಿಂದ 05-08-2023ರ ವರೆಗೆ.
  • ಅರ್ಜಿ ಮರು ಪರಿಶೀಲನೆ (ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್) – 09-08-2023 ರಿಂದ 12-08-2023ರ ವರೆಗೆ.
  • ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ – 17-08-2023.
  • ನೇರ ಮೌಖಿಕ ಸಂದರ್ಶನ (ಕೌನ್ಸಿಲಿಂಗ್) – 24-08-2023.
  • ಆಯ್ಕೆಯಾದ ಅಭ್ಯರ್ಥಿಗಳು ಸಂಬಂಧ ಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಕೊನೆಯ ದಿನಾಂಕ – 31-08-2023.

Leave a Reply

error: Content is protected !!