ಡಿವೈಡರ್ ಗೆ ದ್ವಿಚಕ್ರ ವಾಹನ‌‌ ಢಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು

ಶೇರ್ ಮಾಡಿ

ಡಿವೈಡರ್ ಗೆ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಮೃತ ಯುವಕನನ್ನು ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21) ಎನ್ನಲಾಗಿದೆ.
ಬುಧವಾರ ಬೆಳಗ್ಗೆ 11.40ರ ಸುಮಾರಿಗೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಅವಘಡ ಸಂಭವಿಸಿದ್ದು. ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು ಕಾಲೇಜಿಗೆ‌ ಹೋಗುವಾಗ ಅಪಘಾತ ಸಂಭವಿಸಿದೆ.

Leave a Reply

error: Content is protected !!