ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪಾಲಕರ ಸಭೆ
ನೆಲ್ಯಾಡಿ: ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ನೆಲ್ಯಾಡಿಯ ಪಾಲಕರ ಸಭೆಯು ಜು.19ರಂದು ವಿದ್ಯಾಸಂಸ್ಥೆಯ ಮಿಲೇನಿಯಂ ಸಭಾಂಗಣದಲ್ಲಿ ನಡೆಯಿತು.
ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸ್ಥಾಪಕ ಕಾರ್ಯದರ್ಶಿಗಳಾಗಿರುವ ಅಬ್ರಹಾಂ ವರ್ಗೀಸ್ ರವರು ಮಾತನಾಡಿ ವಿದ್ಯಾರ್ಥಿಗಳನ್ನು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ, ಜೀವನ ಪಾಠವನ್ನು ನೀಡಿ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಅನುವು ಮಾಡಿಕೊಡುವ ಶಿಕ್ಷಣವನ್ನು ಶಾಲೆಯಲ್ಲಿ ಶಿಕ್ಷಕರು ಹಾಗೂ ಮನೆಯಲ್ಲಿ ಪೋಷಕರು ನೀಡಬೇಕು ಎಂದರು.
ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ.ನೋಮಿಸ್ ಕುರಿಯಕೋಸ್ ರವರು ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಕಲಿಕೆಗೆ ಪೂರಕವಾದ ಚಟುವಟಿಕೆಗಳನ್ನು ನಡೆಸಿ ಉತ್ತಮ ಶಿಕ್ಷಣ ಪಡೆಯುವ ಅವಕಾಶವನ್ನು ಕಲ್ಪಿಸುತ್ತೇವೆ ಎಂದು ಹೇಳಿದರು.
ಮುಖ್ಯಗುರುಗಳಾದ ಹರಿಪ್ರಸಾದ್ ಕೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕ ಕರುಣಾಕರ ರವರು ವಿದ್ಯಾರ್ಥಿಗಳ ಕಲಿಕಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಶ್ರೀಮತಿ ಅನುಷಾ ಎಂ.ಕೆ ಸ್ವಾಗತಿಸಿದರು. ಶ್ರೀಮತಿ ರಕ್ಷಿತಾ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಜೆಸಿಂತಾ ಡಿಸೋಜಾ ವಂದಿಸಿದರು. ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.