ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜು ಶಿಕ್ಷಕ-ರಕ್ಷಕ ಸಭೆ, ಪದಾಧಿಕಾರಿಗಳ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜು ನ 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಜು.20 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಫಾ.ತೋಮಸ್ ಬಿಜಿಲಿ ಓಐಸಿ ವಹಿಸಿ ಮಾತನಾಡಿದ ಅವರು ಶಾಲೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ವಿನಂತಿಸಿಕೊಂಡರು.
ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಜೋಸ್ ಎಂ.ಜೆ, ಪದವಿ ಪೂರ್ವ ಕಾಲೇಜಿನ ಎಚ್ ಓ ಡಿ ಸುಶೀಲ್ ಕುಮಾರ್, ದೈಹಿಕ ಶಿಕ್ಷಕ ನಿರ್ದೇಶಕರಾದ ಮನೋಜ್ ಕೆ.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜೋಸ್ ಪ್ರಕಾಶ್ ಸ್ವಾಗತಿಸಿದರು, ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಶ್ರೀಮತಿ ದೀಪಿಕಾ ಡಿ.ಎಂ ವಂದಿಸಿದರು, ಶ್ರೀಮತಿ ಲುಸ್ಸಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕ-ರಕ್ಷಕ ಸಂಘದ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಾನಂದ ಬಂಟ್ರಿಯಾಲ್, ಉಪಾಧ್ಯಕ್ಷರಾಗಿ ಶ್ರೀಮತಿ ಜೆಸಿಂತಾ ಡಿ’ಸೋಜಾ, ಉಪ ಕಾರ್ಯದರ್ಶಿಯಾಗಿ ಸುಧೀರ್ ಕುಮಾರ್ ಆಯ್ಕೆಯಾದರು.

Leave a Reply

error: Content is protected !!