ಸುಳ್ಯ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ

ಶೇರ್ ಮಾಡಿ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ (ಪದವಿ‌ ಪೂರ್ವ ಕಾಲೇಜುಗಳ ವರೆಗೆ) ಮಂಗಳವಾರ ರಜೆ ಘೋಷಿಸಲಾಗಿದೆ.
ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.

Leave a Reply

error: Content is protected !!