ವಲಯ ಮಟ್ಟದ ಚೆಸ್ ಪಂದ್ಯಾಟ; ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸುವ ಗೋಳಿತಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಜಯ ಗಳಿಸಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
14ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಆಂಗ್ಲ ಮಾಧ್ಯಮ ವಿಭಾಗದ ರೇಷ್ಮಾ 8ನೇ ತರಗತಿ ಪ್ರಥಮ ಸ್ಥಾನ, 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಆಂಗ್ಲ ಮಾಧ್ಯಮ ವಿಭಾಗದ ಪುನೀತ್ ರಾಜ್ 9ನೇ ತರಗತಿ ತೃತೀಯ ಸ್ಥಾನ, 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕನ್ನಡ ಮಾಧ್ಯಮ ವಿಭಾಗದ ಅರ್ಚನಾ 10ನೇ ತರಗತಿ ತೃತೀಯ ಸ್ಥಾನ ಹಾಗೂ ಆಂಗ್ಲ ಮಾಧ್ಯಮ ವಿಭಾಗದ ಅನಘ.ಕೆ 10ನೇ ತರಗತಿ ಪಂಚಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರ.
ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಮಹಮ್ಮದ್ ಹಾರೀಸ್ ರವರು ಮಾರ್ಗದರ್ಶನ ನೀಡಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ರವರು, ಸಂಚಾಲಕರಾದ ಫಾ.ನೋಮಿಸ್ ಕುರಿಯಕೋಸ್ ರವರು ಶುಭ ಹಾರೈಸಿದ್ದಾರೆ. ಹಾಗೂ ಮುಖ್ಯಗುರುಗಳು, ಶಿಕ್ಷಕ ವೃಂದದವರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!