ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಣ್ಣಂಪಾಡಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ನೆಲ್ಯಾಡಿಯ ಆಟೋ ಚಾಲಕ ಮೊರಂಕಳ ನಿವಾಸಿ ಬೈಕ್ ಸವಾರ ಇಕ್ಬಾಲ್ ಮೃತಪಟ್ಟ ಯುವಕ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಪಾರ್ಸೆಲ್ ಲಾರಿಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.
ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ನೆಲ್ಯಾಡಿ ಹೂರ ಠಾಣೆಯ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ ನಾಯ್ಕ, ಶಿವರಾಮ ರೈ ಹಾಗೂ ಪುತ್ತೂರಿನ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.