ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಶೇರ್ ಮಾಡಿ

ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಳೆಯ ನಡುವೆಯೂ ಕಾರ್ಗಿಲ್ ವಿಜಯ ದಿವಸವನ್ನು ಸಂಸ್ಥೆಗಳ ಸಂಚಾಲಕರಾದ ರೆ.ಫಾ.ನೋಮಿಸ್ ಕುರಿಯಕೋಸ್ ಅವರ ನೇತೃತ್ವದಲ್ಲಿ ಆಚರಿಸಲಾಯಿತು.

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ಸರ್ವ ಧರ್ಮ ಪ್ರಾರ್ಥನೆ, ಸಮೂಹ ಗೀತೆಯ ಮುಖಾಂತರ ಗೌರವ ಸಲ್ಲಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ ಏಲಿಯಸ್ ಅವರು ಕಾರ್ಗಿಲ್ ಯುದ್ಧದ ಹಿನ್ನೆಲೆ ಮತ್ತು ಪರಿಣಾಮವನ್ನು ವಿವರಿಸಿದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಅಧ್ಯಾಪಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಿದರು.

ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್.ಕೆ ಸ್ವಾಗತಿಸಿದರು. ಕನ್ನಡ ಮಾಧ್ಯಮದ ಮುಖ್ಯ ಗುರುಗಳಾದ ಥಾಮಸ್.ಎಂ .ಐ ಅವರು ವಂದಿಸಿದರು.

Leave a Reply

error: Content is protected !!