ರಾಜ್ಯ ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ಬದಲಾವಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಈ ನಿಟ್ಟಿನಲ್ಲಿ ಆಯಾ ಜಿಲ್ಲಾ ಆಹಾರ ಇಲಾಖೆ ಕಚೇರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.
ಬದಲಾವಣೆಗೆ ಏನೆಲ್ಲಾ ನಿಯಮ?
ಸಂಬಂಧಗಳು ತಪ್ಪಾಗಿ ನಮೂದಾಗಿದ್ದಲ್ಲಿ ಅಥವಾ ಪುರುಷರು ಕುಟುಂಬದ ಮುಖ್ಯಸ್ಥರಾಗಿದ್ದಲ್ಲಿ ಅಂತಹ ಕುಟುಂಬದ ಮುಖ್ಯಸ್ಥರನ್ನಾಗಿ ಮಹಿಳೆಯನ್ನು ಆಯ್ಕೆ ಮಾಡಲು ಅವಕಾಶ ಲಭ್ಯವಿರುತ್ತದೆ ಹಾಗೂ ಪಡಿತರ ಚೀಟಿಯಲ್ಲಿ ಮರಣ ಹೊಂದಿರುವ ಸದಸ್ಯರನ್ನು ತೆಗೆಯಲು ನ್ಯಾಯಬೆಲೆ ಅಂಗಡಿ ಇ-ಕೆವೈಸಿ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಬದಲಾವಣೆಗೆ ನ್ಯಾಯಬೆಲೆ ಅಂಗಡಿ ಸಂಪರ್ಕಿಸಿ
ಎಲ್ಲಾ ಪಡಿತರ ಚೀಟಿದಾರರು ನಿಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯನ್ನು ಸಂಪರ್ಕಿಸಿ ಅವಕಾಶ ಸದುಪಯೋಗಪಡಿಸಿಕೊಳ್ಳಲು ತಿಳಿಯಪಡಿಸಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ತಿದ್ದುಪಡಿ/ ಸೇರ್ಪಡೆಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರು ತಮ್ಮ ಪಡಿತರ ಚೀಟಿಗೆ ಸಂಬಂಧಿಸಿದ ಕುಂದು ಕೊರತೆಗಳಿಗೆ ಆಯಾ ತಾಲೂಕಿನ ಆಹಾರ ಶಾಖೆಯನ್ನು ಸಂಪರ್ಕಿಸಲು ತಿಳಿಸಿದೆ.