ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಶೇರ್ ಮಾಡಿ

ಪುತ್ತೂರು: ಅಪರಿಚಿತ ಪುರುಷ ವ್ಯಕ್ತಿಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಗುರುವಾರ ಅಪರಾಹ್ನ ಪುತ್ತೂರು ನಗರದ ಪಾಂಗಳಾಯಿ ಎಂಬಲ್ಲಿ ಪತ್ತೆಯಾಗಿದೆ.
ಇಲ್ಲಿನ ಪೊದೆಯೊಂದರ ಬಳಿ ಸುಮಾರು 40 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಮೃತದೇಹದ ಗುರುತು ಪತ್ತೆ, ಇನ್ನಿತರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!