ಮೊಹರಂ ಮೆರವಣಿಗೆ ವೇಳೆ ದುರಂತ: ವಿದ್ಯುತ್ ಸ್ಪರ್ಶಗೊಂಡು ನಾಲ್ವರು ಮೃತ್ಯು, 13 ಮಂದಿಗೆ ಗಾಯ

ಶೇರ್ ಮಾಡಿ

ಮೊಹರಂ ಹಬ್ಬದ ಮೆರವಣಿಗೆ ವೇಳೆ ನಡೆದ ಆಘಾತಕಾರಿ ಘಟನೆಯಲ್ಲಿ ನಾಲ್ವರು ಮೃತಪಟ್ಟು ಹದಿಮೂರು ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್ ನ ಬೊಕಾರೊದಲ್ಲಿ ಶನಿವಾರ ಸಂಭವಿಸಿದೆ.
ಮೊಹರಂ ಹಬ್ಬದ ನಿಮಿತ್ತ ಗುಜರಾತ್‌ನ ಜಾಮ್‌ನಗರದಲ್ಲಿ ತಾಜಿಯಾ ಮೆರವಣಿಗೆ ನಡೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡಿದೆ ಈ ವೇಳೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಅಲ್ಲದೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಹದಿಮೂರು ಮಂದಿ ಗಾಯಗೊಂಡಿದ್ದು ಅವರನ್ನು ತಕ್ಷಣವೇ ಬೊಕಾರೊ ಥರ್ಮಲ್ ಡಿವಿಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದು ಈ ವೇಳೆ ತಾಜಿಯ ಎತ್ತಿಕೊಂಡು ಮೆರವಣಿಗೆ ನಡೆಸುತ್ತಿದ್ದ ವೇಳೆ 11,000 ವೋಲ್ಟ್ ಹೈ ಟೆನ್ಷನ್ ತಂತಿ ಸ್ಪರ್ಶಗೊಂಡು ಮೆರವಣಿಗೆಗೆ ಬಳಸಿದ್ದ ಬ್ಯಾಟರಿಗಳು ಸ್ಪೋಟಗೊಂಡಿದೆ ಇದರಿಂದ ಹೆಚ್ಚಿನ ಅವಘಡ ಸಂಭವಿಸಿದೆ ಎನ್ನಲಾಗಿದೆ.

Leave a Reply

error: Content is protected !!