ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಮಾಹಿತಿ ಕಾರ್ಯಾಗಾರ

ಶೇರ್ ಮಾಡಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಒಂದು ದಿನದ ಕಾರ್ಯಾಗಾರ ಶಾಲಾ ಸಭಾಂಗಣದಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಈ ಕಾರ್ಯಾಗಾರ ನಡೆಯಿತು.

 

ಡಾ.ಸಂದೀಪ್.ಎಚ್.ಎಸ್ ಮಕ್ಕಳ ತಜ್ಞರು ಮತ್ತು ಡಾ.ಅನನ್ಯ ಲಕ್ಷ್ಮೀ ಸಂದೀಪ್ ತಜ್ಞರು ಕಮ್ಯುನಿಟಿ ಮೆಡಿಸಿನ್, ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಹದಿಹರೆಯದ ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ವಿವಿಧ ಚಟುವಟಿಕೆಗಳೊಂದಿಗೆ ಕ್ರಿಯಾಶೀಲರಾಗಿ ನೆರೆವೇರಿಸಿಕೊಟ್ಟರು.

ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿ ಸದಸ್ಯೆಯಾದ ಶ್ರೀಮತಿ ಮಾಲಾ ಮಹೇಶ್ ಉಪಸ್ಥಿತರಿದ್ದರು. ಶ್ರೀಮತಿ ಆಶಾ.ಕೆ ಮತ್ತು ಶ್ರೀಮತಿ ಭಾರತಿ.ಎಸ್.ಎ ಪ್ರಾಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ ಕವಿತಾ, ಶ್ರೀಮತಿ ಶಾಂತಿ, ಶ್ರೀಮತಿ ದೀಪ್ತಿ ಹಾಗೂ ಶ್ರೀಮತಿ ಲತಾ ಕುಮಾರಿ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಲಕ್ಷ್ಮೀ ಹಾಗೂ ಶ್ರೀಮತಿ ರೇಖಾ ಆಚಾರ್ಯ ವಂದಿಸಿದರು.

Leave a Reply

error: Content is protected !!