ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸವನ್ನು ಕಾಲೇಜಿನ ಸಂಚಾಲಕರಾದ ರೆ.ಫಾ.ನೋಮಿಸ್ ಕುರಿಯ ಕೋಸ್ ಹಾಗೂ ಪ್ರಾಚಾರ್ಯರಾದ ಏಲಿಯಾಸ್ ಎಂ.ಕೆ ರವರ ಮಾರ್ಗದರ್ಶನದಲ್ಲಿ ದಿನಾಂಕ 27.07.2023 ರಂದು ಆಚರಿಸಲಾಯಿತು.
ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪ್ರಸ್ತುತ ಕೊಕ್ಕಡದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದೀಪಕ್ ರಾಜ್ ರವರನ್ನು ಎನ್ಎಸ್ಎಸ್ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಾಜರಿದ್ದ ಎನ್ಎಸ್ಎಸ್ ಸ್ವಯಂಸೇವಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ತನ್ನ ಸೈನಿಕ ಜೀವನದ ಮಹತ್ವಪೂರ್ಣ ಘಟನೆಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು. ವಿದ್ಯಾರ್ಥಿಗಳು, ಅಗ್ನಿವೀರ್, ಅಗ್ನಿಪತ್ ಮುಂತಾದ ಯೋಜನೆಗಳ ಮೂಲಕ ಸೈನ್ಯಕ್ಕೆ ಸೇರಿ ದೇಶ ಸೇವೆ ಮಾಡುವುದರೊಂದಿಗೆ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಬೇಕು ಎಂದು ನುಡಿದರು.
ಕಾಲೇಜಿನ ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ ಶೆಟ್ಟಿ.ಕೆ ಸ್ವಾಗತಿಸಿದರು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲಿಜನ್ ನ ಅಧ್ಯಕ್ಷರಾದ Sn.ನಾರಾಯಣ ಬಲ್ಯ, ದೈಹಿಕ ಶಿಕ್ಷಣ ನಿರ್ದೇಶಕರಾದ ಮೊಹಮ್ಮದ್ ಹ್ಯಾರಿಸ್, ಎನ್ಎಸ್ಎಸ್ ಘಟಕ ನಾಯಕ ಮೋಹನ್, ನಾಯಕಿ ಕಾವ್ಯ ಹಾಗೂ ಎನ್ಎಸ್ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.