ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಭಾರತ ವಿರೋಚಿತ ಸೋಲನುಭವಿಸಿದೆ. ಬೌಲಿಂಗ್‌ನಲ್ಲಿ ಹಿಡಿತ ಸಾಧಿಸಿದ್ರೂ, ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 4 ರನ್‌ಗಳ ವಿರೋಚಿತ ಸೋಲನುಭವಿಸಿದೆ.
ಸುಲಭ ಗೆಲುವಿನ ಅತ್ಯುತ್ಸಾಹದಲ್ಲಿದ್ದ ಟೀಂ ಇಂಡಿಯಾಕ್ಕೆ ವಿರೋಚಿತ ಸೋಲು ಭಾರೀ ನಿರಾಸೆ ಮೂಡಿಸಿದೆ. ಈ ನಡುವೆ ವಿಂಡೀಸ್ ತಂಡದ ಗೆಲುವಿಗೆ ಟರ್ನಿಂಗ್ ಪಾಯಿಂಟ್ ಸಿಕ್ಕಿದ್ದೆಲ್ಲಿ ಅಂತಾ ವೇಗಿ ಜೇಸನ್ ಹೋಲ್ಡರ್ ತಿಳಿಸಿದ್ದಾರೆ.
ಮೊದಲ 10 ಓವರ್‌ಗಳ ನಂತರ ಪಂದ್ಯ ರೋಚಕ ಹಂತಕ್ಕೆ ತಲುಪಿತ್ತು. ನಮ್ಮ ತಂಡ ಫೀಲ್ಡಿಂಗ್ ಬಿಗಿಗೊಳಿಸಿತ್ತು. ಆದ್ರೆ 16ನೇ ಓವರ್‌ನಲ್ಲಿ ಬೌಲಿಂಗ್‌ಗೆ ಇಳಿದಾಗ ಮೊದಲ ಎಸೆತದಲ್ಲೇ ಹಾರ್ದಿಕ್ ಪಾಂಡ್ಯ ಬೌಲ್ಡ್ ಆದರು. ಮರು ಎಸೆತದಲ್ಲಿ ಅಕ್ಷರ್ ಪಟೇಲ್ ಬೇಡದ ರನ್ ಕದಿಯಲು ಯತ್ನಿಸಿ ಸಂಜು ಸ್ಯಾಮ್ಸನ್‌ರನ್ನ ರನೌಟ್ ಆಗುವಂತೆ ಮಾಡಿದ್ರು. ಇದು ಟೀಂ ಇಂಡಿಯಾ ಗೆಲುವಿನ ಮೇಲೆ ಪರಿಣಾಮ ಬೀರಿತ್ತು. ಆ ನಂತರದಲ್ಲಿ ಅಕ್ಷರ್ ಪಟೇಲ್ ಸಹ ಸಿಕ್ಸರ್ ಸಿಡಿಸುವ ಬರದಲ್ಲಿ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು. ಇದು ವಿಂಡೀಸ್ ರೋಚಕ ಗೆಲುವಿಗೆ ಕಾರಣವಾಯ್ತು ಅಂತಾ ಜೇಸನ್ ಹೋಲ್ಡರ್ ಪೋಸ್ಟ್ ಪ್ರೆಸೆಂಟೇಷನ್‌ನಲ್ಲಿ ಹೇಳಿದ್ದಾರೆ.
ನಿವೃತ್ತಿ ಸುಳಿವು ನೀಡಿದ ಜೇಸನ್ ಹೋಲ್ಡರ್: ಮುಂದುವರಿದು ಮಾತನಾಡುತ್ತಾ, ಜೇಸನ್ ಹೋಲ್ಡರ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವ ಸುಳಿವು ನೀಡಿದರು. ನಾನು ಸ್ವಲ್ಪ ವಿರಾಮ ಬಯಸುತ್ತಿದ್ದೇನೆ ಅಂತಾ ಹೇಳಿದ್ದಾರೆ.
ಗುರುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿತ್ತು. ಈ ರನ್‌ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಸಾಧ್ಯವಾಗಿ 4 ರನ್‌ಗಳ ವಿರೋಚಿತ ಸೋಲನುಭವಿಸಿತು. ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಭಾರತ 2ನೇ ಟಿ20 ಪಂದ್ಯವನ್ನಾಡಲಿದೆ.