ನೆರೆಮನೆಯ ಮಹಿಳೆ ಸ್ನಾನ ಮಾಡುವಾಗ ಮೊಬೈಲ್ ನಲ್ಲಿ ವೀಡಿಯೊ‌ ಚಿತ್ರೀಕರಣ: ಬಂಧನ

ಶೇರ್ ಮಾಡಿ

ಮಂಗಳೂರು: ನೆರೆ‌ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ.

ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು‌ ಬಂದಿದೆ. ಈತ ಹಿಂದೂ ಜಾಗರಣ ವೇದಿಕೆ ಪಕ್ಷಿಕೆರೆ ಘಟಕದ ಸಕ್ರೀಯ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ. ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ‌ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ.
ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್‌ ಸಹಿತ ಆತನನ್ನು ವಶಕ್ಕೆ ಪಡೆದು ಠಾಣೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!