ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಶೇರ್ ಮಾಡಿ

ಸ್ಯಾಂಡಲ್‌ ವುಡ್‌ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ವಿದೇಶಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅವರಿಗೆ ಹಠಾತ್‌ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಬ್ಯಾಂಕಾಕ್‌ ನಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ಪ್ರವಾಸದಲ್ಲಿದ್ದ ವೇಳೆ ಅವರಿಗೆ ಲೋ ಬಿಪಿ ಆಗಿ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎನ್ನಲಾಗಿದೆ.
ಸ್ಪಂದನಾ ವಿಜಯ್ ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಜನಿಸಿದರು. ಮಾಜಿ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರು ನಟ ವಿಜಯ್ ರಾಘವೇಂದ್ರ ಅವರನ್ನು 2007ರಲ್ಲಿ ವಿವಾಹವಾದರು. ಸ್ಪಂದನಾ ಅವರು 2016 ರಲ್ಲಿ ವಿ.ರವಿಚಂದ್ರನ್ ಜೊತೆಗೆ ಅಪೂರ್ವ ಚಿತ್ರದಲ್ಲಿ ನಟಿಸಿದ್ದಾರೆ.

ನಾಳೆ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!