ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ

ಶೇರ್ ಮಾಡಿ

ನೇಸರ ಜ.18: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಕಾರ್ಯಭಾರವನ್ನು ನಿರ್ವಹಿಸಲು ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ,ಹೊರಡಿಸಲಾಗಿರುವ ಸರಕಾರಿ ಆದೇಶದಲ್ಲಿ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗರಿಷ್ಠ 8/10 ಗಂಟೆಗಳ ಕಾರ್ಯಕ್ಕೆ ಬದಲಾಗಿ 15 ಗಂಟೆಗಳ ಕಾರ್ಯಭಾರವನ್ನು ನೀಡಿ ಗೌರವಧನವನ್ನು ಹೆಚ್ಚಿಸಲಾಗಿದೆ.ಅತಿಥಿ ಉಪನ್ಯಾಸಕರಾಗಿ ಹೆಚ್ಚಿನವರಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ನೀಡುವುದರೊಂದಿಗೆ ಪಟ್ಟಿ ತಯಾರಿಸಲು ಆದೇಶಿಸಲಾಗಿದೆ.

2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ದಿನಾಂಕ 17-01-2022 ರಿಂದ ಆನ್ಲೈನ್ ಮೂಲಕ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದ್ದು.ದಿನಾಂಕ 21-01-2022ರ ಇಲಾಖೆಯ ಅಂತರ್ಜಾಲ ತಾಣ https:/dce.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅತಿಥಿ ಉಪನ್ಯಾಸಕರು ಅರ್ಜಿಯಲ್ಲಿ ನೀಡಿರುವ ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ ಸುತ್ತೋಲೆಯಲ್ಲಿ ತಿಳಿಸಿರುವ ಕೆಳಕಂಡ ಮಾನದಂಡಗಳನ್ವಯ ಕಾಲೇಜುಗಳಲ್ಲಿ ವಿಷಯವಾರು ಲಭ್ಯವಿರುವ ಕಾರ್ಯಭಾರಕ್ಕನುಗುಣವಾಗಿ ಅಗತ್ಯವಿರುವ ಅರ್ಹ ಅಭ್ಯರ್ಥಿಗಳ ರಾಜ್ಯ ವ್ಯಾಪ್ತಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ಅತಿಥಿ ಉಪನ್ಯಾಸಕರು ಅವರು ಕಾರ್ಯನಿರ್ವಹಿಸಲು ಇಚ್ಚಿಸುವ 10 ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ 10 ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅವರಿಗೆ ಅವಕಾಶ ಲಭ್ಯವಾಗದಿದ್ದಲ್ಲಿ ಯಾವ ಕಾಲೇಜಿನಲ್ಲಿ ಕಾರ್ಯಭಾರ ಲಭ್ಯವಿದೆಯೋ ಅಂತ ಕಾಲೇಜಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗುವುದು.

ಅಂತಿಮವಾಗಿ ಆಯ್ಕೆಗೊಂಡ ಅಭ್ಯರ್ಥಿಗಳನ್ನು ಅವರು ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳಿಗೆ ಪಟ್ಟಿಯನ್ನು ರವಾನಿಸಲಾಗುತ್ತದೆ.ಪ್ರಾಂಶುಪಾಲರು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸಿರುವ ವಿವರಗಳನ್ನು ಅವರ ವಿದ್ಯಾರ್ಹತೆ ಮತ್ತು ಸೇವಾ ಪ್ರಮಾಣ ಪತ್ರಗಳನ್ನು ಪರಿಶೀಲಿಸಿ,ಕ್ರಮಬದ್ಧವಾಗಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ಹಾಜರು ಪಡಿಸಿಕೊಳ್ಳುವುದು.

ಒಂದು ವೇಳೆ ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಿದಲ್ಲಿ ಅಂತಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಆಯ್ಕೆ ಪಟ್ಟಿ ಪ್ರಕ್ರಿಯೆಯಿಂದ ಅನರ್ಹಗೊಳಿಸಿ ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

ಆಯ್ಕೆಗೊಂಡ ಅಭ್ಯರ್ಥಿಗಳು ಆಯಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿದ್ದರೆ ಅವರ ಬದಲಿಗೆ ನಂತರದ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಕಾಲೇಜಿಗೆ ರವಾನಿಸಲಾಗುವುದು.

 

 

 

Leave a Reply

error: Content is protected !!