ನೆಲ್ಯಾಡಿ: ಪರಿಸರ ಜಾಗೃತಿ, ಸಸಿ ವಿತರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ಕಟ್ಟೆಮಜಲು ಒಕ್ಕೂಟದ ವತಿಯಿಂದ ಪಡುಬೆಟ್ಟು ವಿಷ್ಣುಮೂರ್ತಿ ದೇವಾಸ್ಥಾನದಲ್ಲಿ ಪರಿಸರ ಸಂರಕ್ಷಣೆ ಮತ್ತು ಪರಿಸರ ಜಾಗೃತಿ, ಸಸಿ ವಿತರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ವಿಷ್ಣುಮೂರ್ತಿ ದೇವಾಸ್ಥಾನದ ಅರ್ಚಕರಾದ ಆದಿತ್ಯ ಭಟ್, ದೇವಾಸ್ಥಾನದ ಆಡಳಿತ ಮೊಕ್ತೇಸರರಾದ ಸುಬ್ರಹ್ಮಣ್ಯ ಶಬರಾಯ, ಆಡಳಿತ ಮಂಡಳಿ ಅಧ್ಯಕ್ಷರಾದ ಸತೀಶ್ ಭಟ್, ನೆಲ್ಯಾಡಿ ವಲಯ ಒಕ್ಕೂಟದ ಅಧ್ಯಕ್ಷರಾದ ಕುಶಾಲಪ್ಪ ಗೌಡ, ವಲಯ ಜನಜಾಗೃತಿ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್, ಮಾಜಿ ಕೇಂದ್ರ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಹಾರ್ಪಳ, ಕಡಬ ತಾಲೂಕು ಕೃಷಿ ಮೇಲ್ವಿಚಾರಕರಾದ ಸೋಮೇಶ್, ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ಕಟ್ಟೆಮಜಲು ಒಕ್ಕೂಟದ ಅಧ್ಯಕ್ಷರಾದ ಮಾರ್ಸೆಲ್ ಡಿ.ಸೋಜ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ನೆಲ್ಯಾಡಿ ಒಕ್ಕೂಟದ ಅಧ್ಯಕ್ಷರಾದ ಸುಮಿತ್ರಾ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ,ಮಾಜಿ ಒಕ್ಕೂಟದ ಅಧ್ಯಕ್ಷರಾದ ಸವಿತಾ,ಆಡಳಿತ ಮಂಡಳಿ ಸದಸ್ಯರಾದ ಕಾಂತಪ್ಪ ಪೂವಾಜೆ, ಜನಜಾಗೃತಿ ಸದಸ್ಯರಾದ ತುಕಾರಾಮ ರೈ , ಸೇವಾಪ್ರತಿನಿಧಿ ನಮಿತಾ ಶೆಟ್ಟಿ,ಒಕ್ಕೂಟದ ಪದಾಧಿಕಾರಿಗಳು ,ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಾರ್ಸೆಲ್ ಡಿ ಸೋಜಾ ರವರು ಸ್ವಾಗತಿಸಿ, ಸೇವಾಪ್ರತಿನಿಧಿ ಸುಮನಾ ವಂದಿಸಿದರು. ಹೇಮಾವತಿ ಜೆ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!