ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಉಜಿರೆಯ ಎಂ.ಎಲ್‌.ಟಿ.ಸಿ ಯ ನಿವೃತ್ತ ಪ್ರಾಂಶುಪಾಲರಾದ ಎಂ.ಬಿ ಅಶೋಕ್ ಕುಮಾರ್ ಇವರು ನೆರವೇರಿಸಿದರು.
ಕುಕ್ಕೆ ಸುಬ್ರಹ್ಮಣ್ಯೇಶ್ವರ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾಲೇಜಿನ ಕಾರ್ಯದರ್ಶಿಗಳಾದ ಡಾ.ನಿಂಗಯ್ಯ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀ ವತ್ಸ ಇವರು ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ ಸ್ವಾಗತಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸಾದ್ ಎನ್ ಯನ್ನು ಧನ್ಯವಾದ ಸಮರ್ಪಣೆ ಮಾಡಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮಧುರ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!