ಸ್ಪಂದನಾ ಪುಣ್ಯ ಸ್ಮರಣೆಯಲ್ಲಿ ಕುಂಟುತ್ತಲೇ ಎಂಟ್ರಿ ಕೊಟ್ಟ ನಟ- ಏನಾಯ್ತು ಶ್ರೀಮುರಳಿಗೆ?

ಶೇರ್ ಮಾಡಿ

ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ 11ನೇ ದಿನದ ಪುಣ್ಯಸ್ಮರಣೆಯಲ್ಲಿ ಶ್ರೀಮುರಳಿ ಭಾಗಿಯಾಗಿದ್ದಾರೆ. ಸಹೋದರ ವಿಜಯ- ಪುತ್ರ ಶೌರ್ಯ ಆಗಮನದ ಬಳಿಕ ಮುರಳಿ ಕೂಡ ಭಾಗವಹಿಸಿದ್ದು, ಮತ್ತೆ ಕಾಲು ನೋವಿನ ಸ್ಥಿತಿಯಲ್ಲಿಯೇ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ ನಟನಿಗೆ ಏನಾಯ್ತು ಅಂತಾ ಅಭಿಮಾನಿಗಳು ಆತಂಕಗೊಂಡಿದ್ದಾರೆ.
ಉತ್ತರಕ್ರಿಯೆ ಇಂದು (ಆಗಸ್ಟ್ 16) ಬೆಳಿಗ್ಗೆ 8:30ರಿಂದ ಸ್ಪಂದನಾ ಸ್ವಗೃಹದಲ್ಲಿ ಶಾಂತಿ ಹೋಮ ನೆರವೇರಿದೆ. ಸ್ಪಂದನಾ 11ನೇ ದಿನದ ಪುಣ್ಯಸ್ಮರಣೆಯಲ್ಲಿ ಶಿವಣ್ಣ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಮಗನ ಕೈ ಹಿಡಿದು ವಿಜಯ ಎಂಟ್ರಿ ಕೊಟ್ಟರೆ, ಅತ್ತಿಗೆ ಸ್ಪಂದನಾ ಪುಣ್ಯಸ್ಮರಣೆಯಲ್ಲಿ ಕುಂಟುತ್ತಾಲೇ ಶ್ರೀಮುರಳಿ ಎಂಟ್ರಿ ಕೊಟ್ಟಿದ್ದಾರೆ. ಕಾಲಿನ ನೋವಿನಿಂದಲೇ ನಿಧಾನಕ್ಕೆ ಹೆಜ್ಜೆ ಇಡುತ್ತಾ ಬಂದಿದ್ದಾರೆ. ಕೆಲ ದಿನಗಳ ಹಿಂದೆ ಬಘೀರ ಸಿನಿಮಾದ ಶೂಟಿಂಗ್‌ನಲ್ಲಿ ಶ್ರೀಮುರಳಿಗೆ ಪೆಟ್ಟಾಗಿತ್ತು. ಬಳಿಕ ಚೇತರಿಸಿಕೊಂಡಿದ್ದರು. ಸ್ಪಂದನಾ ಅಂತ್ಯಕ್ರಿಯೆ ಸಂದರ್ಭದಲ್ಲಿ ಚೆನ್ನಾಗಿದ್ರಲ್ಲಾ ಈಗ ಶ್ರೀಮುರಳಿಗೆ ಏನಾಯ್ತು ಎಂದು ಫ್ಯಾನ್ಸ್ ಆತಂಕಗೊಂಡಿದ್ದಾರೆ.

NESARA|| WhatsApp ||GROUPS

                             

 

                                                       

 

💢ಜಾಹೀರಾತು💢

 

Leave a Reply

error: Content is protected !!