ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ಕಡ ಇಲ್ಲಿನ ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.
ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಮತ್ತು ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ವಿಶ್ವನಾಥ ಶೆಟ್ಟಿ ಕೆ ಪೋಕ್ಸೊ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯಿದೆಯಲ್ಲಿ ಅಪರಾಧಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ನೀಡು ವಂತಹ ಅವಕಾಶವಿರುವ ಕಾರಣ ಸಮಾಜದಲ್ಲಿ ಲೈಂಗಿಕ ಅಪರಾಧಗಳಿಗೆ ಕಡಿವಾಣ ಹಾಕಬಹುದಾಗಿದೆ. ಯುವ ಜನತೆಯಲ್ಲಿ ಅಪರಾಧಗಳು ಹೆಚ್ಚುತ್ತಿರಲು ಮಾದಕ ದ್ರವ್ಯಗಳ ಸೇವನೆ ಒಂದು ಮುಖ್ಯ ಕಾರಣವಾಗಿದೆ, ವಿದ್ಯಾರ್ಥಿಗಳು ಶಿಸ್ತು ಮತ್ತು ಸಂಯಮದಿಂದ ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸಿಕೊಂಡರೆ ಅಪರಾಧಗಳಿಂದ ತಮ್ಮನ್ನು ತಾವು ಸಂರಕ್ಷಿಸಿಕೊಳ್ಳಬಹುದು ಎಂದು ಅವರು ನುಡಿದರು.
ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಬೀನಾ ಸಾಗರ ಉಪಸ್ಥಿತರಿದ್ದರು. ರಸಾಯನ ಶಾಸ್ತ್ರ ಉಪನ್ಯಾಸಕರಾದ ಮಂಜುನಾಥ್ ನಾಯ್ಕ್ ಸ್ವಾಗತಿಸಿದರು.
ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿ ಸೀತಾ ಲಕ್ಷ್ಮಿ ಧನ್ಯವಾದಗೈದರು. ಜೀವಶಾಸ್ತ್ರ ಉಪನ್ಯಾಸಕಿ ಜೋಳಿ ಜಾಕೊಬ್, ಸಮಾಜಶಾಸ್ತ್ರ ಉಪನ್ಯಾಸಕಿ ಅಭಿನಯ, ಇತಿಹಾಸ ಉಪನ್ಯಾಸಕಿ ಭಾಗಿರಥಿ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕ ಹರೀಶ್ ಹಾಗೂ ಅಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.