ಪಡುಬೆಟ್ಟು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ

ಶೇರ್ ಮಾಡಿ

ನೆಲ್ಯಾಡಿ: ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಅತಿಥಿಗಳಿಂದ ದೀಪ ಬೆಳಗಿಸುವುದರ ಮೂಲಕ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶಿವಪ್ರಸಾದ್ ಬೀದಿಮಜಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರವಿಪ್ರಸಾದ್ ಶೆಟ್ಟಿ, ಸಲಾಂ ಬಿಲಾಲ್, ಪ್ರಕಾಶ್ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಬಾಕಿಲ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಜನಾರ್ದನ ಗೌಡ,‌ ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವಿಚಂದ್ರ ಪಡುಬೆಟ್ಟು, ಮುಖ್ಯ ಗುರುಗಳಾದ ಶ್ರೀಮತಿ ಜೆಸ್ಸಿ ಕೆ.ಎ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಲೀಲಾವತಿ ಎಂ ಉಪಸ್ಥಿತರಿದ್ದರು.

ಪ್ರಾರ್ಥಿಸಿದರು. ಮುಖ್ಯಗುರುಗಳಾದ ಶ್ರೀಮತಿ ಜೆಸ್ಸಿ ಕೆ.ಎ. ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಕಮಲಾಕ್ಷಿ ಕೆ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಲೀಲಾವತಿ ಎಂ ವಂದಿಸಿದರು.

ಬಳಿಕ ವಾಲಿಬಾಲ್ ಪಂದ್ಯಾಟಕ್ಕೆ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಜನಾರ್ದನ ಗೌಡ ರವರು ಸಾಂಕೇತಿಕವಾಗಿ ಚಾಲನೆ ನೀಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದರು.
ಬಾಲಕರ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕೀಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಇಲ್ಲಿನ ವಿದ್ಯಾರ್ಥಿನಿಯರು ಪ್ರಥಮ ಹಾಗೂ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವಿಚಂದ್ರ ಪಡುಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ರವಿಪ್ರಸಾದ್ ಶೆಟ್ಟಿ, ಸಲಾಂ ಬಿಲಾಲ್, ಶ್ರೀಮತಿ ಜಯಲಕ್ಷ್ಮಿ, ಪ್ರಕಾಶ್ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಬಾಕಿಲ, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ, ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕುಶಾಲಪ್ಪ ಗೌಡ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶಿವಪ್ರಸಾದ್ ಬೀದಿಮಜಲು, ಮುಖ್ಯಗುರುಗಳಾದ ಶ್ರೀಮತಿ ಜೆಸ್ಸಿ ಕೆಎ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಲೀಲಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸಹ ಶಿಕ್ಷಕಿ ಶ್ರೀಮತಿ ಮಮತಾ ಸಿ.ಹೆಚ್. ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಶ್ರೀಮತಿ ಕಮಲಾಕ್ಷಿ ಕೆ ವಂದಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಸಜಿನ ಕೆ.ಎ. ಶ್ರೀಮತಿ ಕವಿತಾ ಡಿ. ಅತಿಥಿ ಶಿಕ್ಷಕಿಯಾದ ಶ್ರೀಮತಿ ತೀರ್ಥ ಪಿ.ವಿ. ಗೌರವ ಶಿಕ್ಷಕಿ ಶ್ರೀಮತಿ ನ್ಯಾನ್ಸಿ ಲಿಝಿ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಶಾಲಾ ವಿದ್ಯಾರ್ಥಿಗಳು, ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದು ಸಹಕಾರ ನೀಡಿದರು.

Leave a Reply

error: Content is protected !!