ಮುಂಗಾರು ಮತ್ತೆ ಚುರುಕು – ರಾಜ್ಯದಲ್ಲಿ ಮುಂದಿನ 4-5 ದಿನಗಳ ಕಾಲ ಮಳೆ ಸಾಧ್ಯತೆ

ಶೇರ್ ಮಾಡಿ

ರಾಜ್ಯದಲ್ಲಿ ಕೈಕೊಟ್ಟಿದ್ದ ಮುಂಗಾರು ಇಂದಿನಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 4 – 5 ದಿನಗಳ ಕಾಲ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಗುರವಾಗಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೇ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಲೆನಾಡಿನ ಭಾಗವಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಉಳಿದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಕುಂಠಿತಗೊಂಡಿದ್ದ ಮುಂಗಾರು ಚುರುಕುಗೊಳ್ಳುವ ಭರವಸೆ ಮೂಡಿದೆ.

Leave a Reply

error: Content is protected !!