ಸುಳ್ಯ: ಗ್ರಾಮ ಕರಣಿಕ ಲೋಕಾಯುಕ್ತ ಬಲೆಗೆ

ಶೇರ್ ಮಾಡಿ

ಹಕ್ಕು ಖುಲಾಸೆಗೆ ಅರ್ಜಿ ವಿಲೇವಾರಿ ಮಾಡಲು ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಕರಣಿಕ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಆ.19ರ ಶನಿವಾರ ನಡೆದಿದೆ.
ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಆಡಳಿತಾಧಿಕಾರಿ ಮಿಯಾಸಾಬ್ ಮುಲ್ಲಾ ಬಂಧಿತ ಅಧಿಕಾರಿ.
ಅರಂತೋಡು ಗ್ರಾಮದ ಅಡ್ತಲೆ ನಿವಾಸಿ ಹರಿಪ್ರಸಾದ್ ಎಂಬವರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಲೇವಾರಿ ಮಾಡಲು ಎಂಟು ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು.
ಅದರಂತೆ ಈ ಮೊದಲು ಮೂರು ಸಾವಿರ ರೂ. ಹಣ ಹರಿಪ್ರಸಾದ್ ಅವರಿಂದ ಮಿಯಾಸಾಬ್ ಮುಲ್ಲಾ ಪಡೆದುಕೊಂಡಿದ್ದರು. ಉಳಿದ 5 ಸಾವಿರವನ್ನು ಶನಿವಾರ ಸುಳ್ಯ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಹರಿಪ್ರಸಾದ್ ಅವರಿಂದ ಸ್ವೀಕರಿಸುವ ವೇಳೆ ಮಿಯಾಸಾಬ್ ಟ್ರ್ಯಾಕ್‌ಗೆ ತಯಾರಿ ನಡೆಸಿದ್ದ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿಗಳಾದ ಕಲಾವತಿ, ಚೆಲುವರಾಜು, ಟ್ರ್ಯಾಕ್ ಲೇಯಿಂಗ್ ಆಫೀಸರ್ ಅಮಾರುಲ್ಲಾ ಸೇರಿದಂತೆ ಮತ್ತಿತರ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಹರಿಪ್ರಸಾದ್ ಎರಡು ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಲಂಚ ಸ್ವೀಕರಿಸುತ್ತಿರುವ ಸಂದರ್ಭದಲ್ಲೇ ಅಧಿಕಾರಿಯನ್ನು ಬಲೆಗೆ ಕಡವಿದ್ದಾರೆ.
ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮಹಜರು ಪ್ರಕ್ರಿಯೆ ನಡೆಸಲಾಗಿ, ಬಂಧಿತ ಅಧಿಕಾರಿಯನ್ನು ನ್ಯಾಯಲಯಕ್ಕೆ ಹಾಜರು ಪಡಿಸಲಾಗಿದೆ.

Leave a Reply

error: Content is protected !!