ಪುಟ್ಟ ಬಾಲಕನನ್ನು ನೆಲಕ್ಕೆ ಬಡಿದು ಕೊಂದ ಖಾವಿಧಾರಿ

ಶೇರ್ ಮಾಡಿ

5 ವರ್ಷದ ಬಾಲಕನನ್ನು ಖಾವಿಧಾರಿಯೊಬ್ಬ ನೆಲಕ್ಕೆ ಬಡಿದು ಕೊಂದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಕ್ತಿ ಪದೇ ಪದೇ ಮಗುವನ್ನು ನೆಲಕ್ಕೆ ಬಡಿಯುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಹತ್ಯೆಗೈದ ಆರೋಪಿಯನ್ನು ಓಂಪ್ರಕಾಶ್ (52) ಎಂದು ಗುರುತಿಸಲಾಗಿದೆ. ಆರೋಪಿ ಸಪ್ತಕೋಸಿ ಯಾತ್ರೆಗೆ ತೆರಳುತ್ತಿದ್ದ. ಈ ವೇಳೆ ಮಾರ್ಗದಲ್ಲಿ ಎದುರಾದ ಬಾಲಕನನ್ನು ಹತ್ಯೆ ಮಾಡಿದ್ದಾನೆ. ಹತ್ಯೆಯ ಹಿಂದಿನ ಕಾರಣ ತಿಳಿದುಬಂದಿಲ್ಲ.ಹತ್ಯೆಗೀಡಾದ ಬಾಲಕನ ತಂದೆ ಅಂಗಡಿಯೊಂದನ್ನು ನಡೆಸುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಳಿಕ ಸ್ಥಳೀಯರು ಆಕ್ರೋಶಗೊಂಡು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಯ ಬಳಿಕ ಘಟನೆಯ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಸಿಸಿ ಕ್ಯಾಮೆರಾಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Leave a Reply

error: Content is protected !!