ಬೆಳ್ತಂಗಡಿ: ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯಳ ಮನೆಗೆ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಸೌಜನ್ಯ ಮೃತದೇಹ ದೊರೆತ ಸ್ಥಳಕ್ಕೆ ಭೇಟಿ ನೀಡಿದ ಅವರು ಸ್ಥಳೀಯ ಪೊಲೀಸರಿಂದ ಮಾಹಿತಿಗಳನ್ನು ಪಡೆದುಕೊಂಡರು. ಸ್ಥಳದಲ್ಲಿಯೇ ಸೌಜನ್ಯ ತಾಯಿ ಕುಸುಮಾವತಿ ಹಾಗು ಮಾವ ವಿಠಲ ಗೌಡ ಅವರಿಂದ ಮಾಹಿತಿ ಪಡೆದು ಕೊಂಡ ಅವರು ಬಳಿಕ ಸೌಜನ್ಯ ಅವರ ಮನೆಗೆ ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು.
ಅನ್ಯಾಯಕ್ಕೆ ಈಡಾದ ಕುಟುಂಬದ ಪರವಾಗಿ ನಿಲ್ಲುವುದಾಗಿ ತಿಳಿಸಿದ ಅವರು ಈ ಪ್ರಕರಣದಲ್ಲಿ ಆಯೋಗ ಯಾವ ರೀತಿಯಾಗಿ ಕೆಲಸ ಮಾಡಬಹುದು ಎಂಬ ವಿಚಾರವನ್ನು ಪರಿಶೀಲಿಸುತ್ತೇವೆ, ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ಧವಾಗಿದೆ. ಅಲ್ಲದೆ ವಿಚಾರದ ಬಗ್ಗೆ ತಿಳಿದುಕೊಂಡು ಅದನ್ನು ಸರಕಾರದ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು. ಕಾನೂನಿನಲ್ಲಿ ಯಾವೆಲ್ಲ ರೀತಿಯಲ್ಲಿ ಮುಂದುವರಿಯಲು ಸಾಧ್ಯವಿದೆಯೋ ಅದೆಲ್ಲವನ್ನೂ ಮಾಡಲು ಸಿದ್ಧವಿರುವುದಾಗಿ ತಿಳಿಸಿದರು.
ಸಿಡಿಪಿಒ ಪ್ರಿಯಾ ಆಗ್ನೆಸ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.