ಚಂದ್ರಯಾನ-3ರಲ್ಲಿ ದಿಗ್ವಿಜಯ:ಚಂದ್ರನ ದಕ್ಷಿಣ ಧ್ರುವದ ಮೇಲೆ ನೌಕೆಯನ್ನು ಇಳಿಸಿದ ವಿಶ್ವದ ಮೊದಲ ದೇಶ ಭಾರತ

ಶೇರ್ ಮಾಡಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಚಂದ್ರಯಾನ- 3 ಯೋಜನೆಯ ಇಡೀ ಜಗತ್ತು ತಿರುಗಿ ನೋಡುವಂತಹ ಸಾಧನೆ ಮಾಡಿದೆ. ಯಾವ ದೇಶವೂ ಮಾಡದ ವಿಶಿಷ್ಟ ಸಾಧನೆಯನ್ನು ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ತನ್ನದಾಗಿಸಿಕೊಂಡಿದೆ. ಮಹತ್ವಾಕಾಂಕ್ಷೆಯ ಚಂದ್ರಯಾನ- 3 ಯೋಜನೆಯ, ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿಯುವ ಪ್ರಕ್ರಿಯೆ ಯಶಸ್ವಿಯಾಗಿದೆ. ಕೋಟ್ಯಂತರ ಭಾರತೀಯರ ಹಾರೈಕೆ ಫಲಿಸಿದ ಸಂದರ್ಭವಿದು.

ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ನೌಕೆಯನ್ನು ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜೊತೆಗೆ ಚಂದ್ರಯಾನದಲ್ಲಿ ಯಶಸ್ವಿಯಾಗಿರುವ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳ ಸಾಲಿಗೆ ಸೇರಿಕೊಂಡಿದೆ.

ಸಾಕಷ್ಟು ಕುತೂಹಲ, ಆತಂಕ, ನಿರೀಕ್ಷೆಗಳ ನಡುವೆ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಯಾವುದೇ ಅಡ್ಡಿ ಆತಂಕವಿಲ್ಲದೆ ನಿಧಾನವಾಗಿ ಹಾಗೂ ಯಶಸ್ವಿಯಾಗಿ ಚಂದ್ರನ ಮೇಲ್ಮೈಯಲ್ಲಿ ಇಳಿಯುವ ಮೂಲಕ 140 ಕೋಟಿ ಭಾರತೀಯರ ಕನಸು ಮತ್ತು ಹಾರೈಕೆಗಳನ್ನು ನನಸಾಗಿಸಿದೆ.

Leave a Reply

error: Content is protected !!