ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ರದ್ದು

ಶೇರ್ ಮಾಡಿ

ನೇಸರ ಜ21: ಕೊರೊನಾ ವೈರಸ್‌ ನಿಯಂತ್ರಣಕ್ಕೆ ಜಾರಿಗೆ ತಂದಿದ್ದ ರಾತ್ರಿ ಕರ್ಫ್ಯೂ ಅನ್ನು ತಕ್ಞಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಿ ರಾಜ್ಯ ಸರಕಾರ ಘೋಷಣೆ ಮಾಡಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಗಳೂರು ಸಿಎಂ ಕಚೇರಿ ಕೃಷ್ಣಾದಲ್ಲಿ ಹಿರಿಯ ಸಚಿವರು, ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ತಜ್ಞರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸಲಹೆ-ಸೂಚನೆ, ಅಭಿಪ್ರಾಯಗಳ ಬಗ್ಗೆ ಸಮಾಲೋಚನೆ ನಡೆಸಿದ ನಂತರ ವೀಕೆಂಡ್‌ ಕರ್ಫ್ಯೂ ರದ್ದುಪಡಿಸುವ ನಿರ್ಧಾರ ಘೋಷಣೆ ಮಾಡಲಾಯಿತು.


ಕಂದಾಯ ಸಚಿವ ಆರ್‌. ಅಶೋಕ, ಆರಗ ಜ್ಞಾನೇಂದ್ರ ಅವರು ಸಭೆಯ ನಂತರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.ವೈಜ್ಞಾನಿಕ ನೆಲೆಗಟ್ಟಿನಲ್ಲಿ ಹಾಗೂ ತಜ್ಞರ ಅಭಿಪ್ರಾಯಗಳನ್ನು ಸಂಗ್ರಹಿಸಿದ ನಂತರ ಸುದೀರ್ಘವಾಗಿ ಚರ್ಚೆ ನಡೆಸಿದ ನಂತರ ವೀಕೆಂಡ್‌ ಕರ್ಫ್ಯೂ ರದ್ದು ಮಾಡಲಾಗಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಹಾಗೂ ಇತರೆ ಕೊರೊನಾ ಕಠಿಣ ಮಾರ್ಗಸೂಚಿಗಳು ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದರು.ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಆಸ್ಪತ್ರೆಗೆ ಸೇರುತ್ತಿರುವವರ ಪ್ರಮಾಣ ಶೇಕಡ 5ಕ್ಕಿಂತ ಕಡಿಮೆ ಇದೆ. ಒಂದು ವೇಳೆ ಶೇಕಡ 5ಕ್ಕಿಂತ ಹೆಚ್ಚಾದರೆ ಮತ್ತೆ ವೀಕೆಂಡ್‌ ಕರ್ಫ್ಯೂ ಜಾರಿಗೆ ತರಲಾಗುವುದು. ಜನರು ಕೂಡ ಕೋವಿಡ್‌ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು ಎಂದು ಸಚಿವ ಅಶೋಕ ಮನವಿ ಮಾಡಿದರು.

ಈಗಾಗಲೇ ಜಾರಿಯಲ್ಲಿರುವ 50:50 ನಿಯಮ, ಸಾರ್ವಜನಿಕ ಸಭೆ ಸಮಾರಂಭಗಳಿಗೆ, ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ಸೀಮಿತ ಸಂಖ್ಯೆಯ ಅತಿಥಿಗಳಿಗೆ ಕಲ್ಪಿಸಲಾಗಿದೆ. ಎಲ್ಲ ಕಠಿಣ ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ. ಶನಿವಾರ ಮತ್ತು ಭಾನುವಾರ ಹೋಟೆಲ್‌ಗಳಲ್ಲಿ ಸರ್ವೀಸ್‌ಗೆ ಅವಕಾಶ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಥಿಯೇಟರ್‌, ಮಾಲ್‌ಗಳಿಗೆ ವಿಧಿಸಲಾಗಿದ್ದ ನಿರ್ಬಂಧ ಹಿಂಪಡೆಯಲಾಗಿದೆ. 50:50 ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ. ವೀಕೆಂಡ್‌ನಲ್ಲಿಯೂ ಸಿನಿಮಾ ನೋಡಲು ಅನುವು ಮಾಡಿಕೊಡಲಾಗಿದೆ ಎಂದು ಅಶೋಕ ವಿವರಿಸಿದರು.


ಬೆಂಗಳೂರು ಹೊರತುಪಡಿಸಿ ಕೊರೊನಾ ಸೋಂಕು ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು, ತಾಲೂಕು ಆಡಳಿತಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಬೆಂಗಳೂರಿನಲ್ಲಿ ಇನ್ನೂ ಒಂದು ವಾರಗಳ ಕಾಲ (ಜನವರಿ 29ರವರೆಗೆ) ಶಾಲೆಗಳು ಬಂದ್‌ ಆಗಿರಲಿವೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ತಿಳಿಸಿದರು.

Leave a Reply

error: Content is protected !!