2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳು ಸೇರಿದಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಿದೆ. ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಿದ್ದು, ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.
ತಾತ್ಕಾಲಿಕ ವೇಳಾಪಟ್ಟಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 25-08-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-09-2023
ರಾಜ್ಯವ್ಯಾಪಿ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ : 04-09-2023
ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸಿಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ದಿನಾಂಕ : 08-09-2023
ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಕೌನ್ಸಿಲಿಂಗ್ ನಡೆಸುವ ದಿನಾಂಕಗಳು: 11-09-2023 ರಿಂದ 15-09-2023
ಕೌನ್ಸಿಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ದಿನಾಂಕ : 16-09-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಇಲಾಖೆ ವೆಬ್‌ಸೈಟ್ ಲಿಂಕ್ ಕ್ಲಿಕ್ ಮಾಡಿ.
Apply Online Direct Link
https://dce.kar.nic.in/dceemis/Application.aspx
ಅತಿಥಿ ಉಪನ್ಯಾಸಕರ ನೇಮಕಾತಿಗೆ ವಿದ್ಯಾರ್ಹತೆ
ಅಭ್ಯರ್ಥಿಯು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಅನ್ನು ಗಣನೆಗೆ ತೆಗೆದುಕೊಳ್ಳುವುದು.
ಸ್ನಾತಕೋತ್ತರ ಪದವಿಯಲ್ಲಿ ಶೇಕಡ 60 ಅಂಕ ಪಡೆದಿದ್ದಲ್ಲಿ ಅದರ ಶೇಕಡ 25 ರಷ್ಟು ಅಂದರೆ 15 ಅಂಕಗಳು ಎಂಬುದಾಗಿ ಗಣನೆಗೆ ತೆಗೆದುಕೊಳ್ಳುವುದು.
ಹೆಚ್ಚುವರಿ ವಿದ್ಯಾರ್ಹತೆ
ಪಿಹೆಚ್.ಡಿ ವಿದ್ಯಾರ್ಹತೆ ಪಡೆದಿದ್ದಲ್ಲಿ 12 ಅಂಕಗಳನ್ನು, ಎನ್‌ಇಟಿ / ಕೆ.ಸೆಟ್ / ಎಸ್‌ಎಲ್‌ಇಟಿ ವಿದ್ಯಾರ್ಹತೆ ಪಡೆದಿದ್ದಲ್ಲಿ 09 ಅಂಕಗಳನ್ನು, ಎಂ.ಫಿಲ್ ವಿದ್ಯಾರ್ಹತೆ ಪಡೆದಿದ್ದಲ್ಲಿ 06 ಅಂಕಗಳನ್ನು, ಅಲ್ಲದೇ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಪರಿಗಣಿಸಿ ಆಯ್ಕೆ ಪಟ್ಟಿ ಸಿದ್ಧತೆ ನಡೆಸಲಾಗುತ್ತದೆ.
ಮೇಲೆ ತಿಳಿಸಿದ ಮಾನದಂಡಗಳನ್ನು ಅನುಸರಿಸಿ ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ ರಾಜ್ಯವ್ಯಾಪಿ ಮೆರಿಟ್ ಪಟ್ಟಿ ಅನ್ನು ಪ್ರಕಟಿಸಲಾಗುವುದು.
ಅತಿಥಿ ಉಪನ್ಯಾಸಕರಿಗೆ ಗೌರವಧನ ವಿವರ
- 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ.32,000.
- 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ.30,000.
- 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ.28,000.
- 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ.26,000.