ಪಡುಬೆಟ್ಟು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಕ್ನಾನಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕರ ಹಾಗೂ ಬಾಲಕಿಯರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಲೀಲಾವತಿ.ಎಂ ಇವರು ತರಬೇತಿ ನೀಡಿರುತ್ತಾರೆ.