ನೆಲ್ಯಾಡಿ: ಬೈಕ್ ಮತ್ತು ಕಾರುಗಳ ಮಧ್ಯೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ ತಾ.ಪಂ ಮಾಜಿ ಸದಸ್ಯ

ಶೇರ್ ಮಾಡಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮಧ್ಯೆ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಇಂದು ಬೆಳಗ್ಗೆ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ.

ಬೈಕ್ ಸವಾರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಕಾಲಿಗೆ ತೀವ್ರವಾದ ಗಾಯವಾಗಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ನೆಲ್ಯಾಡಿ ಯಿಂದ ಮಂಗಳೂರಿಗೆ ತೆರಳುತ್ತಿರುವ ಆಲ್ಟೊ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಅನ್ನು ತುಂಬಿಸಿಕೊಂಡು ಬರುತ್ತಿದ್ದ ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

error: Content is protected !!