ಅಕ್ರಮ ಮರಮಟ್ಟು ಸಾಗಾಟ; ಆರೋಪಿ ಸಹಿತ 7 ಲಕ್ಷ ಮೌಲ್ಯದ ಸೊತ್ತು ವಶ

ಶೇರ್ ಮಾಡಿ

ಕಟ್ಟಿಗೆಯ ಉದ್ದೇಶದಿಂದ ವಿವಿಧ ಜಾತಿಯ ಮರಗಳನ್ನು ಅಕ್ರಮವಾಗಿ ಕಡಿದು ಮರದ ತುಂಡುಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ವೇಳೆ ಬಂಟ್ವಾಳ ಅರಣ್ಯ ಇಲಾಖೆಯ ತಂಡ ದಾಳಿ ನಡೆಸಿ ಆರೋಪಿ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ ಬಿ.ಸಿ.ರೋಡಿನಲ್ಲಿ ನಡೆದಿದೆ.

ಹೆದ್ದಾರಿಯಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿಯಂತೆ ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್‌ ಬಳಿಗಾರ್‌ ನೇತೃತ್ವದ ತಂಡ ದಾಳಿ ನಡೆಸಿ ಬಿ.ಸಿ.ರೋಡು ಜಂಕ್ಷನ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.
ಲಾರಿ ಹಾಗೂ ವಶಪಡಿಸಿಕೊಂಡ ಮರ ದಿಮ್ಮಿಗಳ ಮೌಲ್ಯ 7 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ವಲಯ ಅರಣ್ಯಾಧಿಕಾರಿಗಳ ತಂಡದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರೀತಮ್‌ ಎಸ್‌., ಯಶೋಧರ, ಗಸ್ತು ಅರಣ್ಯ ಪಾಲಕರಾದ ಜಿತೇಶ್‌ ಪಿ., ದಯಾನಂದ, ಶೋಭಿತ್‌ ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್‌ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್‌.ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್‌ ಪಿ. ಅವರ ಮಾರ್ಗದರ್ಶನದಲ್ಲಿ ವಲಯ ಅಧಿಕಾರಿ ರಾಜೇಶ್‌ ಬಳಿಗಾರ್‌ ಅವರು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ.

Leave a Reply

error: Content is protected !!