ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ಮಹಿಳಾ ಅಧಿಕಾರಿ ನೇಣಿಗೆ ಶರಣು

ಶೇರ್ ಮಾಡಿ

ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಂಡ್ಯ ಮೂಲದ ರಶ್ಮಿ(27) ಮೃತ ಮಹಿಳಾ ಅಧಿಕಾರಿ.
ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಅರಣ್ಯ ಇಲಾಖೆ ರಿಸರ್ಚ್ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿಯ ಅರಣ್ಯ ಇಲಾಖೆ ಸಂತಾಪ ಸೂಚಿಸಿದೆ.

Leave a Reply

error: Content is protected !!