ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆ.30 ರಂದು 2023-24 ನೇ ಅವಧಿಯಲ್ಲಿ ಮಹಾವಿದ್ಯಾಲಯದ ಪದವಿ ವಿಭಾಗಕ್ಕೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ವಿದ್ಯಾ ಸಂಸ್ಥೆಯನ್ನು ಪರಿಚಯಿಸುವುದರ ಮೂಲಕ ಸ್ವಾಗತ ಕಾರ್ಯಕ್ರಮವು ನೆರವೇರಿತು.
ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ದಿನೇಶ್ ಕೆ. ಅಧ್ಯಕ್ಷ ಸ್ಥಾನವನ್ನು ವಹಿಸಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ಶಿಸ್ತಿಗೆ ಸಂಬಂಧಪಟ್ಟ ನಿಯಮಗಳ ಕುರಿತು ಹಾಗೂ ಕ್ರೀಡಾ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥರು ಹಾಗೂ ರೋವರ್ಸ್ ರೆಂಜರ್ಸ್ ಲೀಡರ್ ಶ್ರೀರಾಮ ಪ್ರಸಾದ್ ಮಹಾವಿದ್ಯಾಲಯದ ಪರೀಕ್ಷೆಗೆ ಸಂಬಂಧಪಟ್ಟ ಮಾಹಿತಿ ಹಾಗೂ ರೋವರ್ಸ್ ರೆಂಜರ್ಸ್ ಘಟಕದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ ಕೆ. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕುರಿತು ಮಾಹಿತಿಯನ್ನು ನೀಡಿದರು. ಯೂತ್ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಸೃಜನ್ ಮುಂಡೂಡಿ ಘಟಕದ ಕುರಿತು ಮಾಹಿತಿಯನ್ನು ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಪ್ರಮೀಳಾ ವಿದ್ಯಾರ್ಥಿಗಳಿಗೆ ಕೊಡಲ್ಪಡುವ ಸ್ಕಾಲರ್ಶಿಪ್ ನ ಕುರಿತು ಮಾಹಿತಿಯನ್ನು ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಪುಷ್ಪಾ ಡಿ. ಮಹಾವಿದ್ಯಾಲಯದ ಸಾಂಸ್ಕೃತಿಕ ಘಟಕಗಳಾದ ಕುಸುಮ ಸಾರಂಗ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಯಕ್ಷಗಾನ ತಂಡದ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಪಿಯು ವಿಭಾಗದಲ್ಲಿ ಅತ್ಯಂತ ಹೆಚ್ಚು ಅಂಕವನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಬಹುಮಾನವನ್ನು ನೀಡಲಾಯಿತು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ರಮ್ಯಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಅಶ್ವಿನಿ ಕಾರ್ಯಕ್ರಮ ಸಂಯೋಜಿಸಿದರು.