ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ಪ್ರಯಾಣ; 123 ಪ್ರಕರಣ ದಾಖಲು

ಶೇರ್ ಮಾಡಿ

ಮಂಗಳೂರು: ನಗರದಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ಆರೋಪದ ಮೇರೆಗೆ ಮಂಗಳೂರು ಸಂಚಾರ ಪೊಲೀಸರು ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿ 123 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮೊನ್ನೆ ಮಧ್ಯಾಹ್ನ ನಗರದ ನಂತೂರು ಸರ್ಕಲ್ ಬಳಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಫುಟ್‌ಬೋರ್ಡ್‌ನಲ್ಲಿ ನಿಂತಿದ್ದ ಕಂಡೆಕ್ಟರ್ ಡಾಮಾರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಹಾಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಬಸ್ ಮಾಲಕರ ಜೊತೆ ಮಾತುಕತೆ ನಡೆಸಿ ಕೆಲವೊಂದು ಸೂಚನೆಗಳನ್ನು ನೀಡಿ ಅವುಗಳ ಪಾಲನೆಗೆ ನಿರ್ದೇಶನ ನೀಡಿದ್ದರು. ಗುರುವಾರ ಬಸ್ ಮಾಲಕರ ಜತೆ ಎರಡನೇ ಹಂತದ ಸಭೆ ನಡೆಸಿದ ಆಯುಕ್ತರು ಬಸ್‌ಗಳಿಗೆ ಬಾಗಿಲು ಅಳವಡಿಸಲು ಸೂಚಿಸಿದ್ದಾರೆ. ಇದಕ್ಕೆ ಬಸ್ ಮಾಲಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ಅಥವಾ ಸಿಬ್ಬಂದಿ ವರ್ಗವು ನೇತಾಡದಂತೆ ಸೂಚನೆ ನೀಡಲಾಗುವುದು. ಒಂದು ವೇಳೆ ಈ ಸೂಚನೆ ಮೀರಿ ನಡೆದರೆ ಬಸ್ ಸಂಚಾರ ಅವಕಾಶ ನೀಡಲಾಗುವುದಿಲ್ಲ. ಅಲ್ಲದೆ ಈ ನಿಟ್ಟಿನಲ್ಲಿ ಎಲ್ಲರಲ್ಲೂ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಬಸ್ ಮಾಲಕರ ಸಂಘದ ಮುಖಂಡರು ಭರವಸೆ ನೀಡಿರುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Reply

error: Content is protected !!