ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಶೇರ್ ಮಾಡಿ

ಅರಸಿನಮಕ್ಕಿ: ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು ಶಶಿಧರ್ ಜೆ ಎಸ್ (ಗಣಿತ ಶಿಕ್ಷಕರು)ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಶಾಲೆಗೆ ವರ್ಗಾವಣೆಗೊಂಡಿರುತ್ತಾರೆ ಹಾಗೆಯೇ ಇನ್ನೋರ್ವ ಶಿಕ್ಷಕರಾದ ಶಶಿಕಾಂತ್ (ವಿಜ್ಞಾನ ಶಿಕ್ಷಕರು) ರವರು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಶಾಲೆಗೆ ವರ್ಗಾವಣೆಗೊಂಡಿರುತ್ತಾರೆ.
ವರ್ಗಾವಣೆಗೊಂಡಿರುವ ಶಿಕ್ಷಕರಿಗೆ ಎಸ್ ಡಿ ಎಂ ಸಿ, ಪೋಷಕ ವೃಂದ ಮತ್ತು ಶಾಲಾ ವತಿಯಿಂದ ಬೀಳ್ಕೊಡುಗೆ ಸಮಾರಂಭ ಅರಸಿನಮಕ್ಕಿ ಪ್ರೌಢಶಾಲೆಯಲ್ಲಿ ನಡೆಯಿತು ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ತನಿಯಪ್ಪ ಗೌಡರು ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರ ಹಾಗೂ ಎಸ್ ಡಿ ಎಂ ಸಿ ಸದಸ್ಯರು ವರ್ಗಾವಣೆಗೊಂಡ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಟ್ಟರು.
ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸೇವ್ರಿನ್ ಮಾರ್ಟಿಸ್ ಹಾಗೆ ಸ್ವಾಗತವನ್ನು ಶ್ರೀಮತಿ ಮೀನಾಕ್ಷಿ ಮತ್ತು ವಂದನಾರ್ಪಣೆಯನ್ನು ಶ್ರೀಮತಿ ಮಂಜುಳಾ ನೆರವೇರಿಸಿದರು.

Leave a Reply

error: Content is protected !!