ಯುವಕನೋರ್ವನಿಗೆ ಚೂರಿ ಇರಿತ

ಶೇರ್ ಮಾಡಿ

ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನೋರ್ವನಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ.

ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌ (23) ಚೂರಿ ಇರಿತಕ್ಕೆ ಒಳಗಾದ ಯುವಕ ಎಂದು ತಿಳಿದು ಬಂದಿದೆ.ಸಫ್ವಾನ್‌ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಸಫ್ವಾನ್‌ ಗೆಳೆಯರೊಂದಿಗೆ ಆಟವಾಡಿ ಮನೆಗೆ ತೆರಳುತ್ತಿದ್ದ ವೇಳೆ ಚೂರಿ ಇರಿದಿರುವುದಾಗಿ ಹೇಳಲಾಗುತ್ತಿದೆ. ಸುರತ್ಕಲ್‌ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

error: Content is protected !!