ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ; ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

ಶೇರ್ ಮಾಡಿ

ಶಂಭೂರು:ದೇಶಿಯ ಮಣ್ಣಿನ ಕ್ರೀಡೆ ಕಬಡ್ಡಿಯು ಇಂದು ಭಾರತೀಯರ ಅಚ್ಚುಮೆಚ್ಚಿನ ಆಟವಾಗಿದ್ದು, ಶಾಲಾ ಕಾಲೇಜು ಮಟ್ಟದಲ್ಲಿಯೂ ಅತ್ಯಂತ ಆಸಕ್ತಿಯ ಆಟವಾಗಿರುವುದು ಸಂತಸದಾಯಕವಾದ ಸಂಗತಿಯಾಗಿದೆ ಎಂದು ನರಿಕೊಂಬು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಹೇಳಿದರು.
ಅವರು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ SDMC ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರು ಗ್ರಾಮೀಣ ಸೊಗಡಿನ ಈ ಆಟವನ್ನು ನಮ್ಮ ಶಾಲೆಯಲ್ಲಿ ಆಯೋಜಿಸಿರುವುದು ಸಂತಸ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸವಿತಾ ರಾಮಚಂದ್ರ, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಮೋಹನದಾಸ್, ಸುಜಾತಾ, ವೀಣಾ, ಯುವ ಸಂಗಮ ಸೇವಾ ಟ್ರಸ್ಟ್ ನ ಯಶೋಧರ ಕೊಲ್ಲೂರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಸುಧೀರ್ ನಿರ್ಮಾಲ್, ದುರ್ಗಾಪರಮೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಸೀತಾ ಆನಂದ ಪೂಜಾರಿ, ನಿವೃತ್ತ ಶಿಕ್ಷಕ ಶಂಕರ್ ವಿ, ಕಲ್ಲಡ್ಕ ವಲಯ ಕಬಡ್ಡಿ ನೋಡಲ್ ಭಾಸ್ಕರ್ ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ. ಹರಿಪ್ರಸಾದ್ ಕುಲಾಲ್ ವಂದಿಸಿದರು. ಶಾಲಾ ಶಿಕ್ಷಕ ವೃಂದದವರು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.

ಬಾಲಕರ ವಿಭಾಗದಲ್ಲಿ ಶ್ರೀ ರಾಮ ಪ್ರೌಢಶಾಲೆ ಕಲ್ಲಡ್ಕ ಪ್ರಥಮ, ಕರ್ನಾಟಕ ಪ್ರೌಢಶಾಲೆ ಮಾಣಿ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಪ್ರಥಮ, ಶ್ರೀ ರಾಮ ಪ್ರೌಢಶಾಲೆ ಕಲ್ಲಡ್ಕ ದ್ವಿತೀಯ ಸ್ಥಾನ ಪಡೆದುಕೊಂಡಿತು.

Leave a Reply

error: Content is protected !!