ಹಾಸನ ನ್ಯಾಯಾಲಯಗಳಲ್ಲಿ 10th ಪಾಸಾದವರಿಗೆ ಉದ್ಯೋಗ: Rs.17000 ದಿಂದ 37,900 ವರೆಗೆ ವೇತನ

ಶೇರ್ ಮಾಡಿ

ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 32 ಸೇವಕರು ಹಾಗೂ 11 ಆದೇಶ ಜಾರಿಕಾರರು ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಕರ್ಷಕ ಸಂಬಳ ನೀಡಲಾಗುವ ಈ ಸರ್ಕಾರಿ ಹುದ್ದೆಗಳಿಗೆ ಕೇವಲ ಎಸ್ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ
ಸೇವಕರು : 32
ಆದೇಶ ಜಾರಿಕಾರರು: 11
ಒಟ್ಟು ಹುದ್ದೆಗಳು: 43


ಹುದ್ದೆವಾರು ವೇತನ ಶ್ರೇಣಿ ರೂ.ಗಳಲ್ಲಿ
ಸೇವಕರು : Rs.17000-28950.
ಆದೇಶ ಜಾರಿಕಾರರು: Rs.19,950-37900.

ವಿದ್ಯಾರ್ಹತೆಗಳು
– ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್‌ ಮಾಡಿರಬೇಕು. ಜೊತೆಗೆ ನಿಗದಿಪಡಿಸಿದ ಇತರೆ ಅಗತ್ಯ ಅರ್ಹತೆಗಳನ್ನು ಹೊಂದಿರಬೇಕು.
– ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರಿಣತಿ ಅಪೇಕ್ಷಣೀಯ. ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಘು ಮತ್ತು ಭಾರೀ ವಾಹನ ಚಾಲನಾ ಪರವಾನಗಿ ಹೊಂದಿರುವುದು ಕಡ್ಡಾಯ.
– ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ಕನ್ನಡದಲ್ಲಿ ಓದಲು, ಬರೆಯಲು ಮತ್ತು ವ್ಯವಹರಿಸುವ ಜ್ಞಾನ ಇರಬೇಕು.
– ಸೇವಕರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸ್‌ ಆಗಿರಬೇಕು. ಕನ್ನಡ ಓದಲು, ಬರೆಯಲು ಗೊತ್ತಿರಬೇಕು.

ವಯಸ್ಸಿನ ಅರ್ಹತೆ
ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಅರ್ಹತೆ ಕೆಳಗಿನಂತಿದೆ.
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ 35 ವರ್ಷ.
ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ಆದೇಶ ಜಾರಿಕಾರರ ಹುದ್ದೆಗೆ ಆಯ್ಕೆ ವಿಧಾನ
ವಿದ್ಯಾರ್ಹತೆಯ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1:25 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಕನ್ನಡ ಓದಲು ಹಾಗೂ ಬರೆಯಲು ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಪರೀಕ್ಷೆ 10 ಅಂಕಗಳಿಗೆ ನಡೆಸಲಾಗುವುದು.

ಸೇವಕ ಹುದ್ದೆಗೆ ಆಯ್ಕೆ ವಿಧಾನ
ನ್ಯಾಯಾಲಯಗಳಲ್ಲಿನ ಸೇವಕ (Peon) ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ 1:10 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
-ಕನ್ನಡ ಓದಲು ಹಾಗೂ ಬರೆಯಲು ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಪರೀಕ್ಷೆ 10 ಅಂಕಗಳಿಗೆ ನಡೆಸಲಾಗುವುದು.

ಆಯ್ಕೆ ಪ್ರಕ್ರಿಯೆ ಕುರಿತ ಪ್ರಮುಖ ಸೂಚನೆ / ಪರಿವೀಕ್ಷಣಾ ಅವಧಿ
ಮೇಲೆ ತಿಳಿಸಿದ ಎಲ್ಲ ಹುದ್ದೆಗಳಿಗೆ 10 ಅಂಕಗಳನ್ನು ಸಂದರ್ಶನಕ್ಕೆ ನಿಗದಿಪಡಿಸಲಾಗಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳು 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ, ಕನ್ನಡ ಭಾಷಾ ಪರೀಕ್ಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಮೂಲಕ ಅರ್ಜಿ ಸಲ್ಲಿಸಲು ಡೈರೆಕ್ಟ್‌ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
Notification and Apply Online
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-10-2023 ರ ರಾತ್ರಿ 11-59 ಗಂಟೆವರೆಗೆ.

Leave a Reply

error: Content is protected !!