ನೇಸರ ಜ.24: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 27 ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ.ಈ ತನಕ ಒಟ್ಟು 12393 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು,ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ,ರವಿಕೆ ಕಣ ಹಾಗೂ ಮಂಗಳ ಸೂತ್ರ,ಹೂವಿನ ಹಾರ ನೀಡಲಾಗುವುದು.ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 15ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದುಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ದೂರವಾಣಿ 08256-266644,ವಾಟ್ಸಪ್ ನಂ. 8147263422