ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಘಟಕ, 2023-24 ರ ಶೈಕ್ಷಣಿಕ ಅವಧಿಯ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನೆರವೇರಿತು.
ಸೇವೆ ಹಾಗೂ ಸಮರ್ಪಣಾ ಮನೋಭಾವದಿಂದ ರಾಷ್ಟ್ರೀಯ ಸೇವಾ ಯೋಜನಾ ಘಟಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರೆ ಸುಧೀರ್ಘ ಯಶಸ್ಸನ್ನು ಕಾಣಲು ಸಾಧ್ಯ ಎಂದು ಎಸ್ ಡಿ ಎಂ ಉಜಿರೆ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಪ್ರಶಸ್ತಿ ಪುರಸ್ಕೃತರು ಆದ ಜಯಕುಮಾರ್ ಶೆಟ್ಟಿ ಅತಿಥಿಗಳ ನೆಲೆಯಲ್ಲಿ ನುಡಿದರು.
ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ಡಾ.ದಿನೇಶ್ ಕೆ. ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಐ ಕ್ಯೂ ಎ ಸಿ ಸಂಯೋಜಕರಾದ ಪ್ರೊಫೆಸರ್ ಲತಾ, ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಆರತಿ ಕೆ, ಘಟಕದ ನಾಯಕರುಗಳಾದ ಸಂದೀಪ್, ನವ್ಯಶ್ರೀ, ನಿತೀಶ್ ಕೆ ವಿ ವೇದಿಕೆಯಲ್ಲಿಉಪಸ್ಥಿತರಿದ್ದರು.
ದೀಕ್ಷಿತ ಅತಿಥಿಗಳ ಪರಿಚಯವನ್ನು ನುಡಿದರು. ಇನ್ನೋರ್ವ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಶ್ರೀಮತಿ ನಮಿತಾ ಎಂ ಎ ಸ್ವಾಗತಿಸಿದರು. ಎನ್ ಎಸ್ ಘಟಕದ ನಾಯಕ ಹೃತಿಕ್ ಸಿ.ವಿ ಧನ್ಯವಾದ ಸಮರ್ಪಿಸಿದರು, ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು.