ಸೆ.12ರಂದು ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಶೇರ್ ಮಾಡಿ

ಕೊಕ್ಕಡ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಕೊಕ್ಕಡ ಇದರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ 2023-24 ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು)ಸೆಪ್ಟೆಂಬರ್ 12ನೇ ಮಂಗಳವಾರ ನಡೆಯಲಿದೆ.

ಕೊಕ್ಕಡ ಕ್ಲಸ್ಟರ್ನ 10 ಶಾಲೆಗಳು ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು ಅದೇ ದಿನ ವಿಜೇತರ ಪಟ್ಟಿಯನ್ನು ತಿಳಿಸಲಾಗುವುದು. ಇಲ್ಲಿ ಪ್ರಥಮ ಸ್ಥಾನದಲ್ಲಿ ವಿಜೇತರಾದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ. ಕಾರ್ಯಕ್ರಮವು ಬೆಳಗ್ಗೆ 9:30ಕ್ಕೆ ಆರಂಭಗೊಳ್ಳಲಿರುವುದು ಎಂದು ಆಯೋಜಕರು ತಿಳಿಸಿದ್ದಾರೆ.

Leave a Reply

error: Content is protected !!