ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಂದಾಳ ನಿವಾಸಿ ನಿಸಾರ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳ ತಂಡ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭ ನಿಸಾರ್ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿ ಓಡಿ ಹೋಗಿದ್ದು, ಸ್ನೇಹಿತನಿಗೆ ಕರೆ ಮಾಡಿ ತಿಳಿಸಿ ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.