ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕಕ್ಕೆ ವಿಭಾಗಾಧಿಕಾರಿಗಳ ಭೇಟಿ

ಶೇರ್ ಮಾಡಿ

ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕಕ್ಕೆ ರಾಷ್ಟ್ರೀಯ ಸೇವಾ ಯೋಜನಾ ಕೋಶ ಬೆಂಗಳೂರು ಇದರ ಮಂಗಳೂರು ವಿಭಾಗ ಅಧಿಕಾರಿಗಳಾದ ಶ್ರೀಮತಿ ಸವಿತಾ ಏರ್ಮಾಲ್ ಅಧಿಕೃತ ಭೇಟಿಯನ್ನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು “ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಜೀವನ ಕೌಶಲಗಳನ್ನು ಬೆಳೆಸುತ್ತದೆ. ವಿವಿಧ ಚಟುವಟಿಕೆಗಳ ಮೂಲಕ ಜ್ಞಾನವನ್ನು ಪಡೆಯುವಂತಹ ವಿಶೇಷವಾದ ಕಲಿಕಾ ವಿಧಾನವನ್ನು ಇಲ್ಲಿ ಅನುಸರಿಸಲಾಗ್ತದೆ. ಹಾಗಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಎನ್ಎಸ್ಎಸ್ ಸಹಕಾರಿಯಾಗುತ್ತದೆ” ಎನ್ನುತ್ತಾ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಕೆ ಸಂದರ್ಭೋಚಿತವಾಗಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ತಿಲಕಾಕ್ಷ ಇವರು ಸ್ವಾಗತಿಸಿದರು. ಸಹ ಯೋಜನಾಧಿಕಾರಿಗಳಾದ ಕೀರ್ತನ್ ಧನ್ಯವಾದ ಸಮರ್ಪಿಸಿದರು. ಶ್ರೀಮತಿ ತನುಜ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕದ ನಾಯಕ ಧನರಾಜ್, ನಾಯಕಿ ಸಮೀಕ್ಷ ಉಪಸ್ಥಿತರಿದ್ದರು.

Leave a Reply

error: Content is protected !!