ಬೈಕ್‍ಗೆ ಕಾರು ಢಿಕ್ಕಿ; ನಿಲ್ಲಿಸದೆ ಪರಾರಿಯಾದ ಕಾರು ಚಾಲಕ

ಶೇರ್ ಮಾಡಿ

ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕನಕಮಜಲಿನಲ್ಲಿ ಮಂಗಳವಾರ ನಡೆದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಚೈತನ್ಯ ಎಂಬ ಯುವಕನ ಬೈಕ್ ಗೆ ಕನಕಮಜಲು ಗ್ರಾಮ ಪಂಚಾಯತಿ ಬಳಿ ಢಿಕ್ಕಿ ಹೊಡೆದಿದ್ದು, ಕಾರು ಚಾಲಕ ಅಪಘಾತ ನಡೆಸಿ, ನಿಲ್ಲಿಸದೇ ಪರಾರಿಯಾಗಿದೆ. ಬೈಕ್ ಸವಾರ ಚೈತನ್ಯನ ಕೈ ಕಾಲುಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದಿಂದ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!